ಕೇರಳದ ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ನಡೆದ ಪಟಾಕಿ ಅವಘಡದಲ್ಲಿ 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದು ತಿಳಿದುಬಂದಿದೆ.
ಕಾಸರಗೋಡು (ಕೇರಳ) : ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ ಎಂಬುದು ತಿಳಿದುಬಂದಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆ ಹಾಗೂ ನೀಲೇಶ್ವರ ಮತ್ತು ಕಾಞಂಗಾಡ್ನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Post a Comment