ಮೈಸೂರು : ದಸರಾ ಹಿನ್ನೆಲೆಯಲ್ಲಿ ಅರಮನೆ ನಗರಿ ಸಂಭ್ರಮದಲ್ಲಿ ತೇಲಿದೆ. ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಮತ್ತೊಂದು ಗಂಡು ಮಗು ಜನನವಾಗಿದೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ದೇವಿಗೆ ಮೊದಲೇ ಗಂಡು ಮಗು ಜನಿಸಿತ್ತು. ಇದೀಗ 2ನೇ ಮಗು ಜನನವಾಗಿದ್ದು ಆಯುಧ ಪೂಜೆ ದಿನದಂದು ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾದಂತೆ ಆಗಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
Post a Comment