ಎಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಆದರೆ ಗೃಹ ಲಕ್ಷ್ಮೀಯರು ಮಾತ್ರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಂದಿಲ್ಲ ಎಂಬ ಪಿಸುಮಾತುಗಳನ್ನು ಆಡುತ್ತಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ.
ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀಯರಿಗೆ ಗುಡ್ನ್ಯೂಸ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.
Post a Comment