ವೆನ್ಲಾಕ್ ಆಸ್ಪತ್ರೆಯ 50 ಹಾಸಿಗೆಗಳ ಐಸಿಯು ಕಟ್ಟಡ ಸೇರಿ 25.11 ಕೋಟಿ ರೂ. ಕಾಮಗಾರಿಗಳಿಗೆ ಪ್ರಧಾನಿ ಮೋದಿ ನಾಳೆ ಶಂಕುಸ್ಥಾಪನೆ

ಸಂಸದ ಕ್ಯಾ. ಬ್ರಿಜೇಶ್ ಚೌಟ ಅದ್ಯಕ್ಷತೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ



ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. 


ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ನಾಳೆ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. ಮಧ್ಯಾಹ್ನ 01:10ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಈ ಬಹುಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. 


ಮಂಗಳೂರಿನಲ್ಲಿ ನಡೆಯುವ ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ವೈ ಶೆಟ್ಟಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಸದರ ಕಾರ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


25.11 ಕೋಟಿ ರೂ. ಅನುದಾನ ಬಳಕೆ ಎಲ್ಲಿ?


PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ನ ಎರಡನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣ ಮಾಡಲು 1.11 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget