ಮಂಗಳೂರು : ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು ರಾಜು ಪೂಜಾರಿ ಯವರನ್ನು ಕಣಕ್ಕಿಲಿಸಿದೆ.
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ , ಸಹಕಾರ ಬ್ಯಾಂಕ್ ನಿರ್ದೇಶಕರಾಗಿದ್ದ ರಾಜು ಪೂಜಾರಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ.
ನಿನ್ನೆ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕಿಶೋರ್ ಕುಮಾರ್ ಪುತ್ತೂರು ಘೋಷಿಸಿತ್ತು.
Post a Comment