ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು



ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

06569 ಸಂಖ್ಯೆಯ ರೈಲು ಇದೇ 10ರಂದು ಮಧ್ಯರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡಲಿದ್ದು 11ರಂದು ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06570 ಸಂಖ್ಯೆಯ ರೈಲು 11ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ 4.40ಕ್ಕೆ ಮೈಸೂರು ತಲುಪಲಿದೆ.

ಯಶವಂತಪುರದಿಂದ ಹೊರಡುವ ರೈಲಿಗೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲದಲ್ಲಿ ನಿಲುಗಡೆ ಇದೆ. 06570 ಸಂಖ್ಯೆಯ ರೈಲಿಗೆ ಯಶವಂತಪುರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಮಂಡ್ಯ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆ ಇದೆ ಎಂದು ತಿಳಿಸಲಾಗಿದೆ.

06585 ಸಂಖ್ಯೆಯ ಮೈಸೂರು-ಕಾರವಾರ ಎಕ್ಸ್‌ಪ್ರೆಸ್‌ ಇದೇ 12ರಂದು ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು ಮರುದಿನ ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06586 ಸಂಖ್ಯೆಯ ಕಾರವಾರ-ಮೈಸೂರು ಎಕ್ಸ್‌ಪ್ರೆಸ್‌ 13ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. ಮಂಡ್ಯ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಂಕ್ಷನ್‌, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್‌ ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್‌ ಮತ್ತು ಅಂಕೋಲದಲ್ಲಿ ನಿಲುಗಡೆ ಇದ್ದು ಇದೇ 5ರಂದು ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget