ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಚಾರಣೆ
ಸುಳ್ಯ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ನಿಚ್ಚಳ ಬಹುಮತ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ದ ಹಳೇ ಬಸ್ ನಿಲ್ದಾಣ ಬಳಿ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ.ಟಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನಿರಬೀದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್,ಬಿಜೆಪಿ ಪ್ರಮುಖರಾದ ಸೋಮನಾಥ ಪೂಜಾರಿ, ನಾರಾಯಣ ಶಾಂತಿನಗರ,ಜಿನ್ನಪ್ಪ ಪೂಜಾರಿ,ನಗರ ಪಂಚಾಯತ್ ಸದಸ್ಯೆ ಶಿಲ್ಪ ಸುದೇವ್ ಮತ್ತಿತರರು ಉಪಸ್ಥಿತರಿದ್ದರು
Post a Comment