ಬೆಂಗಳೂರು : ಬೇಲೇಕೇರಿ ಬಂದರು ಮೂಲಕ ನಡೆದಿದೆ ಎನ್ನಲಾದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ನಾಳೆ ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ.
ಒಟ್ಟು 6 ಪ್ರಕರಣಗಳಿಗೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅಂತಿಮ ಆದೇಶವನ್ನು ಹೊರಡಿಸಿದ್ದು, ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಳಿಯ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರ ವಿರುದ್ಧ ಪ್ರಕರಣವಿದ್ದು ಎಲ್ಲಾ ಆರೋಪಿಗಳು ದೋಷಿಗಳು ಎಂದು ತೀರ್ಪು ಪ್ರಕಟಿಸಿದ್ದಾರೆ.
ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಿಸಿದ ಪ್ರಕರಣ ಇದಾಗಿದೆ. ಶಾಸಕ ಸೈಲ್ ಸೇರಿ ಎಲ್ಲ ದೋಷಿಗಳನ್ನು ವಶಕ್ಕೆ ಪಡೆಯಲು ಕೋರ್ಟ್ ಸೂಚಿಸಿದ್ದು, ನಾಳೆ ಸಂಜೆಯ ವೇಳೆಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆಗಳಿವೆ.
ಶಾಸಕ ಸತೀಶ್ ಸೈಲ್ ಕೋರ್ಟ್ ನಿಂದ ಹೊರಬರುತ್ತಿದ್ದಂತೆ ಸಿಬಿಐ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Post a Comment