ಸನಾತನ ಧರ್ಮದ ಕುರಿತ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ: ಉದಯ್ ನಿಧಿ ಸ್ಟಾಲಿನ್ ಪುನರುಚ್ಛಾರ

 


ತಮಿಳುನಾಡು: ಸನಾತನ ಧರ್ಮದ ಕುರಿತ ತನ್ನ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಮಿಳುನಾಡು ಡಿಸಿಎಂ ಉದಯ್ ನಿಧಿ ಸ್ಟಾಲಿನ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ದ್ರಾವಿಡ ನಾಯಕರಾದ ಪೆರಿಯಾರ್, ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರ ಅಭಿಪ್ರಾಯಗಳನ್ನು ನಾನು ಹೇಳಿದ್ದೇನೆ. ನನ್ನ ಹೇಳಿಕೆಯು ಮಹಿಳೆಯರ ಮೇಲಿನ ದಬ್ಬಾಳಿಕೆ ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು. ಆದರೆ ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ವಿದ್ಯಾಭ್ಯಾಸಕ್ಕೆ ಅವಕಾಶವಿರಲಿಲ್ಲ. ಅವರು ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ, ಗಂಡ ಸತ್ತರೆ ಅವರೂ ಸಾಯಬೇಕಾಗಿತ್ತು.

ತಂದೆ ಪೆರಿಯಾರ್ ಈ ಎಲ್ಲದರ ವಿರುದ್ಧ ಮಾತನಾಡಿದರು. ಪೆರಿಯಾರ್, ಅಣ್ಣಾ ಮತ್ತು ಕರುಣಾನಿಧಿ ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಉದಯನಿಧಿ ಹೇಳಿದ್ದಾರೆ.

"ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಉದಾಹರಣೆಗೆ ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಅದನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕಿದೆ" ಎಂದು ತಮಿಳುನಾಡು ಡಿಸಿಎಂ ಉದಯ್ ನಿಧಿ ಸ್ಟಾಲಿನ್ ಹೇಳಿದ್ದರು. ಸ್ಟಾಲಿನ್ ಹೇಳಿಗೆ ವಿರೋಧ ಮತ್ತು ಪ್ರತಿಭಟನೆ ವ್ಯಕ್ತವಾಗಿದ್ದವು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget