ಭಾರತ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ನ ನಾಲ್ಕನೇ ದಿನದಾಟಕ್ಕೆ ಮತ್ತೆ ವರುಣ ಅಡ್ಡಿ ಪಡಿಸಿದ್ದಾನೆ.
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟಕ್ಕೆ ಮತ್ತೆ ಮಳೆ ಅಡ್ಡಿಪಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕನೇ ದಿನದಾಟದಲ್ಲಿ ಮಳೆಗೂ ಮುನ್ನವೇ ಭಾರತದ ಸರ್ಫರಾಜ್ ಶತಕ ಮತ್ತು ರಿಷಭ್ ಪಂತ್ ಅರ್ಧಶತಕ ಸಿಡಿಸಿದ್ದಾರೆ. ಸದ್ಯ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 344 ರನ್ ಸಿಡಿಸಿದ್ದು, 12 ರನ್‌ಗಳ ಹಿನ್ನಡೆಯಲ್ಲಿದೆ.
ಸರ್ಫರಾಜ್ ಚೊಚ್ಚಕ ಶತಕ: ಪಂದ್ಯದ ನಾಲ್ಕನೇ ದಿನದಾಟದಲ್ಲಿ ಯುವ ಬ್ಯಾಟರ್ ಸರ್ಫರಾಜ್ ಖಾನ್ ಚೊಚ್ಚಲ ಶತಕ ಸಿಡಿಸಿದ್ದಾರೆ. 154 ಎಸೆತಗಳನ್ನು ಎದುರಿಸಿರುವ ಅವರು 16 ಬೌಂಡರಿ ಮತ್ತು 3 ಸಿಕ್ಸರ್ ಸಮೇತ ಅಜೇಯವಾಗಿ 125 ರನ್ಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ ಪ್ರಥಮ ಇನ್ನಿಂಗ್ಸ್ನಲ್ಲಿ ಗಾಯಕ್ಕೆ ತುತ್ತಾಗಿದ್ದ ಪಂತ್ ಎರಡನೇ ಇನ್ನಿಂಗ್ಸ್ನಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡಿ ಅರ್ಧಶತಕ ಪೂರೈಸಿದ್ದಾರೆ. ಇವರು 56 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 53 ರನ್ ಕಲೆಹಾಕಿ ಕ್ರೀಸ್ನಲ್ಲಿದ್ದಾರೆ.
ಏತನ್ಮಧ್ಯೆ: 356 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ (52) ಮತ್ತು ವಿರಾಟ್ ಕೊಹ್ಲಿ (70) ಅರ್ಧಶತಕ ಸಿಡಿಸಿದರು.
ಬೆಂಗಳೂರಲ್ಲಿ ಇನ್ನೂ 5 ದಿನ ಮಳೆ: ಬೆಂಗಳೂರಿನಲ್ಲಿ ಇನ್ನೂ 5 ದಿನಗಳ ಕಾಳ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.21ರವರೆಗೆ ನಗರದಲ್ಲಿ ಲಘು ಮಳೆಯಾಗಲಿದ್ದು, ಅ.22 ಮತ್ತು 23 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅ.21ರ ವರೆಗೆ ಸಿಲಿಕಾನ್ ಸಿಟಿಯಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.
Post a Comment