ಬೆಂಗಳೂರು: ಕಳೆದ ವಾರ ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜ ಸಂಜೀವ್ (86) ಅವರು ಇಹಲೋಕ ತ್ಯಜಿಸಿದರು. ಅಮ್ಮನನ್ನು ಕಳೆದುಕೊಂಡ ದುಃಖದಲ್ಲಿರುವ ಸುದೀಪ್ (Kichcha Sudeep) ಅವರಿಗೆ ಧೈರ್ಯ ತುಂಬುವ ಪ್ರಯತ್ನದಲ್ಲಿ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ, ನಟನ ತಾಯಿಗೆ ಸಂತಾಪ ಸೂಚಿಸಿದ್ದಾರೆ.
ನಿಮ್ಮ ತಾಯಿ ನಿಧನದ ಸುದ್ದಿ ಮನಸ್ಸಿಗೆ ಬಹಳ ನೋವುಂಟು ಮಾಡಿದೆ. ಜೀವನದಲ್ಲಿ ಅಮ್ಮನ ಅಗಲಿಕೆ ತುಂಬಲಾರದ ನಷ್ಟ ಎಂದು ಪತ್ರದಲ್ಲಿ ಸುದೀಪ್ ಅವರಿಗೆ ಪ್ರಧಾನಿ ಸಾಂತ್ವನ ಹೇಳಿದ್ದಾರೆ. ಈ ಪತ್ರಕ್ಕೆ ಮೋದಿ ಅವರಿಗೆ ಹೃತೂರ್ವಕ ಧನ್ಯವಾದ ಅರ್ಪಿಸಿದ ಕಿಚ್ಚ ಸುದೀಪ್, ತಮ್ಮ ಟ್ವಿಟರ್ ಖಾತೆಯ ಮೂಲಕ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.
"ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರೇ ನಿಮ್ಮ ಸಹಾನುಭೂತಿಯ ಸಂತಾಪ ಪತ್ರಕ್ಕಾಗಿ ನನ್ನ ಪ್ರಾಮಾಣಿಕ ಧನ್ಯವಾದಗಳು. ನಿಮ್ಮ ಚಿಂತನಶೀಲ ಮಾತುಗಳು ಈ ಆಳವಾದ ಕಷ್ಟದ ಸಮಯದಲ್ಲಿ ಸಾಂತ್ವಾನದ ಮೂಲಸೆಲೆಯನ್ನು ನೀಡಿದೆ. ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ. ನಿಮ್ಮ ವಿಶ್ವಾಸಕ್ಕೆ ನಾನು ಅಭಾರಿ” ಎಂದು ಧನ್ಯವಾದ ತಿಳಿಸಿದ್ದಾರೆ.
Post a Comment