ಸುಳ್ಯ ದಸರಾ ಉತ್ಸವ ಇಂದಿನಿಂದ ಆರಂಭ | ಶ್ರೀ ಶಾರದಾ ದೇವಿಯ ಪ್ರತಿಷ್ಠೆಯ ಜೊತೆಗೆ ಒಂಬತ್ತು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ


ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ - 2024

ಅ.9ರಂದು ಬೆಳಿಗ್ಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಾಗಿ ಶ್ರೀ ಚೆನ್ನಕೇಶವ ದೇವಸ್ಥಾನದ


ಮುಂಭಾಗದಲ್ಲಿ ಶ್ರೀ ಶಾರದಾ ದೇವಿಯ ಪ್ರತಿಷ್ಠೆಯೊಂದಿಗೆ ಆರಂಭಗೊಂಡಿತು. 


ಸುಳ್ಯ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಆರಂಭಗೊಂಡ ಉತ್ಸವ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆಯು ಅದ್ಧೂರಿಯಾಗಿ ಸುಳ್ಯದ ಪ್ರಮುಖ ರಸ್ತೆಯಾಗಿ ಸಾಗಿ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಪ್ರತಿಷ್ಠಾಪನೆಗೊಂಡಿತು.


ಇಂದು ಅಪರಾಹ್ನ ಹಸಿರುವಾಣಿ ಮೆರವಣಿಗೆಯು ಸಮರ್ಪಣೆಗೊಳ್ಳಲಿದ್ದು, ಒಂಭತ್ತು ದಿನಗಳ ಕಾಲ ಸಾಂಸ್ಕೃತಿಕ ವೈಭವ ಜರುಗಲಿದೆ.


ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಅಧ್ಯಕ್ಷ ಡಾ. ಲೀಲಾಧರ್ ಡಿ. ವಿ., ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಕೋಶಾಧಿಕಾರಿ ಗಣೇಶ್ ಆಳ್ವ, ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಕೋಶಾಧಿಕಾರಿ ಅಶೋಕ್ ಪ್ರಭು, ಜೊತೆ ಕಾರ್ಯದರ್ಶಿ ಅನಿಲ್ ಕುಮಾರ್ ಕೆ.ಸಿ., ಗೌರವ ಸಲಹೆಗಾರರುಗಳಾದ ಎನ್. ಜಯಪ್ರಕಾಶ್ ರೈ, ಎನ್.ಎ. ರಾಮಚಂದ್ರ, ಎಂ. ವೆಂಕಪ್ಪ ಗೌಡ, ಅಕ್ಷಯ್ ಕೆ.ಸಿ., ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಕಾರ್ಯದರ್ಶಿ ಎಂ.ಕೆ. ಸತೀಶ್, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಖಜಾಂಜಿ ಸುನಿಲ್ ಕುಮಾರ್ ಕೇರ್ಪಳ, ಶ್ರೀ ಶಾರದಾಂಬ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಕಾರ್ಯದರ್ಶಿ ಶ್ರೀಮತಿ ಶ್ರೀದೇವಿ ನಾಗರಾಜ ಭಟ್, ಗೌರವ ಸಲಹೆಗಾರರಾದ ಡಾ. ಯಶೋದಾ ರಾಮಚಂದ್ರ, ಶ್ರೀಮತಿ ಲತಾ ಮಧುಸೂದನ್, ಮಾಧ್ಯಮ ವಕ್ತಾರರಾದ ಕೃಷ್ಣ ಬೆಟ್ಟ, ಭವಾನಿಶಂಕರ ಕಲ್ಮಡ್ಕ, ಸೇರಿದಂತೆ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಗೌರವ ಸದಸ್ಯರುಗಳು, ಶ್ರೀ ಶಾರದಾಂಬ ಸೇವಾ ಸಮಿತಿಯ ಉಪಾಧ್ಯಕ್ಷರುಗಳು, ಗೌರವ ಸಲಹೆಗಾರರುಗಳು, ಗೌರವ ಸದಸ್ಯರುಗಳು, ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಉಪಾಧ್ಯಕ್ಷರುಗಳು, ಶ್ರೀ ಶಾರದಾಂಬ ಮಹಿಳಾ ಸಮಿತಿಯ ಗೌರವ ಸದಸ್ಯರುಗಳು, ಸುಳ್ಯ ನಗರದ ಎಲ್ಲಾ ವಾರ್ಡ್ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget