ಜನವರಿಯಲ್ಲಿ ಸಂಕ್ರಾಂತಿ ದಿನ ನೂತನ ಬ್ರಿಗೇಡ್ ಸ್ಥಾಪನೆ ಕೆ.ಯಸ್.ಈಶ್ವರಪ್ಪ

 


ಬಾಗಲಕೋಟೆ: 'ಬರುವ ಜನವರಿಯ ಸಂಕ್ರಾಂತಿ ದಿನ ನೂತನ ಬ್ರಿಗೇಡ್ ಅಸ್ತಿತ್ವಕ್ಕೆ ಬರಲಿದೆ' ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕಲ್ಯಾಣ ಮಂಟಪದಲ್ಲಿ ಭಾನುವಾರ, ಸಾಧು ಸಂತರು ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ ಜರುಗಿದ 'ಹಿಂದುಳಿದ, ದಲಿತ ಹಾಗೂ ಸಮಗ್ರ ಹಿಂದೂ ಸಮಾಜದ ಸಮಸ್ಯೆಗಳು ಮತ್ತು ಸವಾಲುಗಳು' ಚಿಂತನ-ಮಂಥನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


'ಬಸವಣ್ಣನವರ ಐಕ್ಯಸ್ಥಳ ಕೂಡಲಸಂಗಮದಲ್ಲಿ ಸಂಕ್ರಾಂತಿ ದಿನ ಒಂದು ಸಾವಿರ ಸ್ವಾಮೀಜಿಗಳು ಸೇರಿ ಬ್ರಿಗೇಡ್ ಗೆ ಹೆಸರನ್ನು ತೀರ್ಮಾನಿಸಲಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ಬ್ರಿಗೇಡ್‌ ನ ಕಾರ್ಯಸೂಚಿ ತಯಾರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಮೂಲೆ ಮೂಲೆಗಳಿಂದ 50 ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆ' ಎಂದು ಹೇಳಿದರು.


'ಬ್ರಿಗೇಡ್‌ ಸ್ಥಾಪನೆ ನನಗಾಗಿಯೂ ಅಲ್ಲ, ನನ್ನ ಮಗನಿಗೂ ಅಲ್ಲ. ದಲಿತ ಮತ್ತು ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಅಪೇಕ್ಷೆಯಂತೆ ಸನಾತನ ಹಿಂದೂ ಧರ್ಮದ ಸಂಸ್ಕೃತಿ ಎತ್ತಿ ಹಿಡಿದು, ಹಿಂದುತ್ವ ರಕ್ಷಿಸಿ, ಹಿಂದುಳಿದವರು ಹಾಗೂ ದಲಿತ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಕೊಡಿಸುವುದಕ್ಕಾಗಿ ಸ್ಥಾಪಿಸಲಾಗುತ್ತಿದೆ' ಎಂದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget