ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಒ.4 ರಂದು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮಂಗಳೂರಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ ಅವರು ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗಿರದೆ ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ ಟಿ, ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ ಅಶ್ವಿನಿ ಮತ್ತು ಶಿವಪ್ರಸಾದ್ , ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ದಿಶಾಂತ್, ಉಪಾಧ್ಯಕ್ಷೆ ಕಲ್ಪನಾ ವೈ ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಶಿವಪ್ರಸಾದ್ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಕಮ್ಮಾರ ಶ್ರೀಮತಿ ಲೀಲಾವತಿ ಗುತ್ತಿಗಾರು ಅವರನ್ನು ಸನ್ಮಾನಿಸಲಾಯಿತು. ಸಂಜನಾ ಮತ್ತು ಸಂಖ್ಯಾ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಡಾ. ಪ್ರಸಾದ ಎನ್ ಸ್ವಾಗತಿಸಿ, ದಿಶಾಂತ್ ವಂದಿಸಿದರು.
Post a Comment