ವಿಧಾನ ಪರಿಷತ್‌ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ: ದಕ್ಷಿಣ ಕನ್ನಡ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಂಡೂರಾವ್‌ ಆದೇಶ


ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆಯನ್ನು ಲಘುವಾಗಿ ತೆಗೆದುಕೊಳ್ಳದೆ ಗಂಭೀರವಾಗಿ ತೆಗೆದುಕೊಂಡು ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ ಎಂದು ದ.ಕ.ಜಿಲ್ಲಾಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಉಪ್ಪಿನಂಗಡಿ-ವಿಟ್ಲಬ್ಲಾಕ್‌ ಕಾಂಗ್ರೆಸ್‌ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ರಾಜ್ಯದಲ್ಲಿ ನಮ್ಮ ಸರಕಾರವಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಈ ನಿಟ್ಟಿನಲ್ಲಿ ಎಲ್ಲ ಕ್ಷೇತ್ರಗಳಿಗೆ ನಮ್ಮ ಅಭ್ಯರ್ಥಿ ರಾಜು ಪೂಜಾರಿ ಭೇಟಿ ನೀಡುತ್ತಿದ್ದಾರೆ. ಅವರನ್ನು ಗೆಲ್ಲಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಎಲ್ಲರೂ ಒಗ್ಗಟ್ಟಾಗಿ ಗೆಲುವಿಗಾಗಿ ಶ್ರಮಿಸೋಣ ಎಂದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget