ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ಅ.19ರಂದು ಗ್ಲೋಬಲ್ ಎಜುಕೇಶನ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ದಿನೇಶ್ ಪಿ ಟಿ ವಹಿಸಿದ್ದರು. ದೀಪಕ್ ಬೋಳೂರು ಹಾಗೂ ಭರತ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವಿಸ್ಡನ್ ಇನ್ಸ್ಟಿಟ್ಯೂಷನ್ ನೆಟ್ವರ್ಕ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಯಿತು. ಮಹಾವಿದ್ಯಾಲಯದ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ನ ಸಂಯೋಜಕಿ ಆರತಿ ಕೆ, ವಿದ್ಯಾರ್ಥಿ ಪ್ರತಿನಿಧಿ ಯಶ್ಮಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಗಳನ್ನು ದೀಕ್ಷಾ ಪರಿಚಯಿಸಿದರು. ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು. ಅನ್ವಿತಾ ಸ್ವಾಗತಿಸಿ, ಪವಿತ್ರ ವಂದಿಸಿದರು.
Post a Comment