ಬೆಂಗಳೂರಿಗೆ ಬಂದಿದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್: ಏನಿದರ ಮಹತ್ವ?


ಬೆಂಗಳೂರು : ಪದಾರ್ಥಗಳ ಗುಣಮಟ್ಟ ಪರೀಕ್ಷೆಗಾಗಿ ಆಹಾರ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ “ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್” ಇರಿಸಿದೆ. ಹೌದು, ಗೋಬಿ, ಕಬಾಬ್​, ಪಾನಿಪುರಿ, ಕಾಟನ್ ಕ್ಯಾಂಡಿ ಮತ್ತು ಕೇಕ್​​ಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿತ್ತು. ಇದರಿಂದ ಆತಂಕಗೊಂಡಿರುವ ಜನರು ತಾವು ಖರೀದಿಸುವ ಪದಾರ್ಥಗಳು ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಜನರ ಅನುಮಾನವನ್ನು ನಿವಾರಿಸುವ ನಿಟ್ಟಿನಲ್ಲಿ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದೇಶದಲ್ಲಿಯೇ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಸ್ಥಳಗಳಲ್ಲಿ “ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್” ಸ್ಥಾಪಿಸಿದೆ. ಇದರಿಂದ ಸಾರ್ವಜನಿಕರು ತಾವು ಖರೀದಿಸಿ ಆಹಾರ ಪದಾರ್ಥಗಳನ್ನು ಸ್ಥಳದಲ್ಲೇ ಪರೀಕ್ಷೆಗೆ ಒಳಪಡಿಸಿ, ಫಲಿತಾಂಶ ಪಡೆಯಬಹುದಾಗಿದೆ. ಆಹಾರ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆ ಕಳೆದ ಮೂರು ತಿಂಗಳಿನಿಂದ ಅಸುರಕ್ಷಿತರ ಆಹಾರಗಳ ಮೇಲೆ ಸಮರ ಸಾರಿದೆ. ಜನರ ಆರೋಗ್ಯಕ್ಕೆ ಕುತ್ತು ತರುವ ಅಪಾಯಕಾರಿ ಆಹಾರ ಪದಾರ್ಥಗಳನ್ನು ಪರೀಕ್ಷಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ತರಕಾರಿ, ಆಹಾರ ಧಾನ್ಯಗಳಿರುವ ಸೂಪರ್ ಮಾರ್ಕೆಟ್​​ಗಳಲ್ಲಿ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್ ಇರಿಸುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್​ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಮಾಲ್‍ಗಳಲ್ಲಿ ಪ್ರತಿದಿನ ತಾವು ಬಳಸುವ ಆಹಾರ ಪದಾರ್ಥಗಳಾದ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆ, ಚಹಾ ಪುಡಿ, ಉಪ್ಪು, ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಪನೀರ್, ಬೆಣ್ಣೆ, ತರಕಾರಿಗಳು, ಧನಿಯಾಪುಡಿ, ಕುಡಿಯುವ ನೀರು ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬಹುದು. ರಾಜಧಾನಿಗೆ ಬರುವ ತರಕಾರಿ ಮತ್ತು ಆಹಾರ ಧಾನ್ಯಗಳನ್ನು ಮಾರಾಟ ಮಾಡುವ ಸೂಪರ್ ಮಾರ್ಕೆಟ್ ಗಳಲ್ಲೂ ಫುಡ್ ಟೆಸ್ಟಿಂಗ್ ಕಿಟ್​ಗಳನ್ನ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ. ಈ ಮೂಲಕ ಹಣ್ಣು, ತರಕಾರಿಗಳು ಹಾಗೂ ಆಹಾರ ಧಾನ್ಯಗಳ ಗುಣಮಟ್ಟವನ್ನ ಪರಿಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಿದೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget