ಕಾಂಗ್ರೆಸ್ ಟಿಕೆಟ್‌ಗಾಗಿ ಮಂಜುನಾಥ ಕುನ್ನೂರು ಹಾಗೂ ಅವರ ಮಗ ರಾಜು ಅವರು ಪೈಪೋಟಿ ನಡೆಸಿದ್ದರು. ಆದರೆ, ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ದ ಬಂಡಾಯ ಎದ್ದು ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ, ಮತ್ತೊಂದು ಮಾಜಿ ಶಾಸಕ ಮಂಜುನಾಥ್ ಕುನ್ನೂರು ಸಹ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್‌ಗಾಗಿ ಮಂಜುನಾಥ ಕುನ್ನೂರು ಹಾಗೂ ಅವರ ಮಗ ರಾಜು ಅವರು ಪೈಪೋಟಿ ನಡೆಸಿದ್ದರು. ಆದರೆ, ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಟಿಕೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಶಾಸಕ ಹಾಗೂ ಮಾಜಿ ಸಂಸದ ಮಂಜುನಾಥ ಕುನ್ನೂರು ಅವರು ಬಂಡಾಯದ ಬಾವುಟ ಹಾರಿಸಿದ್ದಾರೆ. ಪಕ್ಷೇತರರಾಗಿ ಕಣಕ್ಕೆ ಇಳಿಯಲು ತೀರ್ಮಾನಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಬಲಿಗರ ಜೊತೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದ್ದ ಮಂಜುನಾಥ ಕುನ್ನೂರು, ನಾಮಪತ್ರ ಸಲ್ಲಿಸಿದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ದ ಇಬ್ಬರು ಬಂಡಾಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್‌ಗೆ ಆಘಾತ ನೀಡುವ ಸಂಗತಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.
ಈಗಾಗಲೇ ಇದೇ ಕ್ಷೇತ್ರದಿಂದ ಕುನ್ನೂರು ಅವರು ಎರಡು ಬಾರಿ ಶಾಸಕರಾಗಿದ್ದರು. ಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾಗಿದ್ದಾರೆ.
Post a Comment