ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಶಿವಮೊಗ್ಗ ಕ್ಷೇತ್ರ ಸಂಸದರಾದ ಬಿವೈ ರಾಘವೇಂದ್ರ ದೆಹಲಿಯಲ್ಲಿ ಭೇಟಿ ಮಾಡಿದರು.
ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತೀ ಎತ್ತರದ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿಯ ಪ್ರತಿಮೆ ನಿರ್ಮಾಣ ಮತ್ತು ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಹಾಗೂ ರಾಜ್ಯಗಳಿಗೆ ನೀಡುವ ಬಂಡವಾಳ ಹೂಡಿಕೆ ವಿಶೇಷ ನೆರವು ಅಡಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ಪಡುವರಿ-ಸೋಮೇಶ್ವರ-ಕೊಲ್ಲೂರು ಆಧ್ಯಾತ್ಮಿಕ ಪ್ರವಾಸೋದ್ಯಮ ಕ್ಲಸ್ಟರ್ ಅನ್ನು ಅಭಿವೃದ್ಧಿಪಡಿಸಲು ಮನವಿ ನೀಡಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಉಪಸ್ಥಿತರಿದ್ದರು.
Post a Comment