ಪುತ್ತೂರು ವಿಶ್ವಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆ
ಪುತ್ತೂರು:ಇಂದು(ಅ.23)ನಡೆದ ವಿಶ್ವಹಿಂದೂ ಪರಿಷದ್ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆಗೆ ಆಗಮಿಸಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕೆಲ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ತನ್ನ ಬೆಂಬಲಿಗರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಕಾರಿನಿಂದ ಇಳಿಯುತ್ತಿದ್ದಂತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೆಲವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಒಂದು ಹಂತದಲ್ಲಿ ವಿರೋಧಿಸುವವರನ್ನು ಉದ್ದೇಶಿಸಿ ಕಾರ್ಯಕ್ರಮ ಮುಗಿಸಿಯೇ ಇಲ್ಲಿಂದ ತೆರಳುತ್ತೇನೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದೇ ವೇಳೆ ಪುತ್ತಿಲ ಬೆಂಬಲಿಗರ ಮತ್ತು ಪುತ್ತಿಲ ಆಗಮನವನ್ನು ವಿರೋಧಿಸಿದ ಕಾರ್ಯಕರ್ತರ ನಡುವೆ ಮಾತಿನ ಚಕಾಮಕಿ ನಡೆದಿದೆ ಎನ್ನಲಾಗಿದೆ. ವಿರೋಧದ ನಡುವೆಯೂ ಪುತ್ತಿಲ ಅವರು ಕೆಲ ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Post a Comment