ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿ ಜಟಾಪಟಿ ಇದೀಗ ಪ್ರಾರಂಭವಾದಂತೆ ಕಾಣುತ್ತಿದೆ. ಹೌದು ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು. ಇಷ್ಟೇ ಅಲ್ಲದೆ ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಹರಿಪ್ರಸಾದ್ ಹೇಳಿದ್ದಾರೆ. ರಾಹುಲ್ ಗಾಂಧಿ ಪ್ರಣಾಳಿಕೆ ಬಗ್ಗೆ ಗೌರವ ಇದ್ರೆ ಜಾತಿ ಗಣತಿಗೆ ಬೆಂಬಲ ನೀಡಿ. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಿದ್ದಾರೆ. ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರೆ. ಅದೇ ರೀತಿ ಪ್ರಪಂಚ ತಲೆ ಕೆಳಗಾದರೆ ಆಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಬೀಳಲಿ ಯಾಕೆ ಹೆದರಬೇಕು ಎಂದು ಹೇಳಿದ್ದಾರೆ.
Post a Comment