ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ನಾಡೋಜ ಸಾಹಿತಿ ಹಂಪ ನಾಗರಾಜಯ್ಯ ದಸರಾ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ,ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಚಾಮುಂಡಿಬೆಟ್ಟದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ನಾಡೋಜ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಡಿಸಿಎಂ ಡಿಕೆಶಿ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ.
Post a Comment