ಬೆಂಗಳೂರು: ದೀಪಾವಳಿಯ ವೇಳೆ ರಾಜ್ಯದಲ್ಲಿ ಪರಿಸರ ಸ್ನೇಹಿ ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ರಾಜ್ಯದಲ್ಲಿ ಪಟಾಕಿಗಳಿಂದ ಯಾವುದೇ ಹಾನಿ, ಗಾಯ ಅಥವಾ ಸಾವು ಸಂಭವಿಸಬಾರದು ಎಂದು ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯಲ್ಲಿ ಒತ್ತಿ ಹೇಳಿದ್ದಾರೆ.
“ದೀಪಾವಳಿ ಸಮೀಪಿಸುತ್ತಿದ್ದು, ಯಾವ ರೀತಿಯ ಪಟಾಕಿಗಳನ್ನು ಸಿಡಿಸಬೇಕು ಎಂಬುದಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ನೀಡಿದೆ. ಹಸುರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ರಾತ್ರಿ 8 ರಿಂದ 10 ರವರೆಗೆ ಸಿಡಿಸಬೇಕು ಎಂದು ಸಿದ್ದರಾಮಯ್ಯ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪಟಾಕಿ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ, ಗೊತ್ತುಪಡಿಸಿದ ಸ್ಥಳದಲ್ಲಿ ಮಾರಾಟ ಮಾಡದ ಮತ್ತು ಸಂಗ್ರಹಿಸಲು ಸರಿಯಾದ ಗೋದಾಮುಗಳಿಲ್ಲದಿದ್ದಲ್ಲಿ ಹಸುರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳನ್ನು ಮಾರಾಟ ಮಾಡುವವರ ವಿರುದ್ಧ ಜಿಲ್ಲಾಧಿಕಾರಿಗಳು ಪ್ರಕರಣಗಳನ್ನು ದಾಖಲಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
Post a Comment