ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ವಾಪಸ್ ಪಡೆದರು.
ಹಾವೇರಿ: ಕಾಂಗ್ರೆಸ್ ಬಂಡಾಯ ಶಮನಗೊಂಡಿದೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಇಂದು ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ಸಚಿವರಾದ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರವನ್ನು ವಾಪಸ್ ಪಡೆದರು. ಜಮೀರ್ ಅವರನ್ನು ಕಳುಹಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸುವ ಟಾಸ್ಕ್ ನೀಡಿದ್ದು, ಅದು ಯಶಸ್ವಿಯಾಗಿದೆ.
ನಾಮಪತ್ರ ವಾಪಸಾತಿಗೆ ಇಂದು ಕೊನೆಯ ದಿನವಾಗಿದ್ದು, ಮಧ್ಯಾಹ್ನ 3 ಗಂಟೆ ಒಳಗೆ ವಾಪಸ್ ಪಡೆಯಲು ಅವಕಾಶವಿತ್ತು. ಅದಕ್ಕೂ ಮುನ್ನವೇ ಖಾದ್ರಿ ನಾಮಪತ್ರ ವಾಪಸ್ ಪಡೆದಿದ್ದಾರೆ.
Post a Comment