BREAKING : ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ : ಸಚಿವ ಈಶ್ವರ ಖಂಡ್ರೆ

 


ಬೆಂಗಳೂರು : ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನ ಕೂಡ ಇದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು.

ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು.


ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು.


ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget