ಸುಬ್ರಹ್ಮಣ್ಯ: ಭಾರತ ಟಿ20 ಕ್ರಿಕೆಟ್ ತಂಡದ ನಾಯಕ, ಭಾರತ ತಂಡದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನ.19 ರಂದು ದೇವಸ್ಥಾನಕ್ಕೆ ಪತ್ನಿ ದೇವಿಶಾ ಶೆಟ್ಟಿ ಅವರ ಜೊತೆ ಭೇಟಿ ನೀಡಿದ ಅವರು ದೇವಳದಲ್ಲಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನಕ್ಕೆ ಆಗಮಿಸಿದ ಸೂರ್ಯಕುಮಾರ್ ಹಾಗೂ ದೇವಿಶಾ ಶೆಟ್ಟಿ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ದಕ್ಷಣ ಆಫ್ರಿಕಾ ಪ್ರವಾಸ ಕೈಗೊಂಡ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 3-1 ಅಂತರದಲ್ಲಿ ಟಿ20 ಸರಣಿ ಜಯಿಸಿತ್ತು. ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂತಿರುಗಿದ ಬಳಿಕ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಕರಾವಳಿ ಮೂಲದವರು. ಕೆಲವು ತಿಂಗಳ ಹಿಂದೆ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಕಾಪು ಹಾಗೂ ಉಡುಪಿಯ ದೇವಾಲಯಗಳಿಗೆ ಭೇಟಿ ನೀಡಿದ್ದರು.
Post a Comment