ಚುನಾವಣಾ ಫಲಿತಾಂಶಗಳು | ಮಹಾರಾಷ್ಟ್ರದಲ್ಲಿ ಮಹಾಯುತಿ- 224; ಜಾರ್ಖಂಡ್‌ನಲ್ಲಿ ಇಂಡಿಯಾ ಬಣ- 51 ಮುನ್ನಡೆ

 


13:23, 23 ನವೆಂಬರ್ 2024

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 4 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

13:16, 23 ನವೆಂಬರ್ 2024

ಜಾರ್ಖಂಡ್‌ನಲ್ಲಿ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಆರ್‌ಜೆಡಿ ಪಕ್ಷವು ಐದರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

13:16, 23 ನವೆಂಬರ್ 2024

ಮಹಾಯುತಿಯಲ್ಲಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ, ಎನ್‌ಸಿಪಿ ಹಾಗೂ ಶಿವಸೇನಾ ನೇತೃತ್ವದ ಮಹಾಯುತಿಯು ಭಾರೀ ಬಹುತಮದೊಂದಿಗೆ ಸರ್ಕಾರ ರಚನೆಯ ಹೊಸ್ತಿಲಲ್ಲಿದೆ. ಜಾರ್ಖಂಡ್‌ನಲ್ಲಿ ಇಂಡಿಯಾ ಬಣ ಮುನ್ನಡೆ ಕಾಯ್ದುಕೊಂಡಿದೆ.

12:19, 23 ನವೆಂಬರ್ 2024

ಮಹಾರಾಷ್ಟ್ರದಲ್ಲಿ 222 ಕ್ಷೇತ್ರಗಳಲ್ಲಿ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿಯ ಪ್ರಮುಖರ ಹಿನ್ನಡೆ ಅನುಭವಿಸಿದ್ದಾರೆ. ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.


10:33, 23 ನವೆಂಬರ್ 2024


ಜಾರ್ಖಂಡ್‌ನ 81 ಕ್ಷೇತ್ರಗಳ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿಕೂಟದ ಇಂಡಿಯಾ ಬಣ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೊದಲು ರಾಜ್ಯದಲ್ಲಿ ಎನ್‌ಡಿಎ ಬಣ ಮುಂದಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯು 211 ಕ್ಷೇತ್ರಗಳಲ್ಲಿ ಮುಂದಿದೆ. ಮಹಾ ವಿಕಾಸ ಅಘಾಡಿ 60 ಕ್ಷೇತ್ರಗಳಲ್ಲಿ ಮುಂದಿದೆ.




09:55,23 ನವೆಂಬರ್ 2024

81 ಕ್ಷೇತ್ರಗಳ ಜಾರ್ಖಂಡ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಅಗತ್ಯವಿರುವ 41 ಕ್ಷೇತ್ರಗಳ ಗಡಿಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ದಾಟಿದೆ. 'ಇಂಡಿಯಾ' ಬಣ 38 ಕ್ಷೇತ್ರಗಳಲ್ಲಿ ಮುಂದಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು 205 ಕ್ಷೇತ್ರಗಳಲ್ಲಿ ಮುಂದಿದ್ದು, ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಎಂವಿಎ 68 ಕ್ಷೇತ್ರಗಳಿಗೆ ಕುಸಿದಿದೆ.


09:39, 23 ನವೆಂಬರ್ 2024

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಅಗತ್ಯವಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. 288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕಾರಕ್ಕೆ 145 ಶಾಸಕರ ಅಗತ್ಯವಿದೆ. ಮಹಾಯುತಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿ 98 ಕ್ಷೇತ್ರಗಳಲ್ಲಿ ಹಾಗೂ ಇತರೆ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

09:22, 23 ನವೆಂಬರ್ 2024

ಇತ್ತೀಚೆಗೆ ಹಂತಕರ ಗುಂಡಿಗೆ ಬಲಿಯಾದ ಬಾಬಾ ಸಿದ್ಧಿಕಿ ಪುತ್ರ ಜಿಶಾನ್ ಸಿದ್ದಿಕಿ ಅವರು ಬಾಂದ್ರಾ ಪೂರ್ವದಲ್ಲಿ ಮುನ್ನಡೆ ಸಾಧಿಸಿದ್ದಾರೆ

09:13, 23 ನವೆಂಬರ್ 2024

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮಹಾ ವಿಕಾಸ ಅಘಾಡಿಯು 83 ಕ್ಷೇತ್ರಗಳಲ್ಲಿ ಮುಂದಿದೆ. ಖಾರ್ಜಂಡ್‌ನಲ್ಲಿ ಎನ್‌ಡಿಎ 35 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಬಣ 31 ಕ್ಷೇತ್ರಗಳಲ್ಲಿ ಮುಂದಿದೆ.

08:38 23 ನವೆಂಬರ್ 2024


ಮಹಾರಾಷ್ಟ್ರದಲ್ಲಿ ಏಕನಾಥ ಶಿಂದೆ, ಅದಿತ್ಯ ಠಾಕ್ರೆ, ದೇವೇಂದ್ರ ಫಡಣವೀಸ್‌ಗೆ ಮುನ್ನಡೆಯಾದರೆ, ಎನ್‌ಸಿಪಿಯ ಅಜಿತ್ ಪವಾರ್‌ ಹಿನ್ನಡೆ ಅನುಭವಿಸಿದ್ದಾರೆ.

08:33, 23 ನವೆಂಬರ್ 2024

ಜಾರ್ಖಂಡ್‌ನಲ್ಲಿ ಎನ್‌ಡಿಎ 17ರಲ್ಲಿ ಹಾಗೂ 'ಇಂಡಿಯಾ' ಬಣಕ್ಕೆ 6 ಕ್ಷೇತ್ರಗಳಲ್ಲಿ ಮುನ್ನಡೆ

08:28 23 ನವೆಂಬರ್ 2024

ಮಹಾಯುತಿಗೆ 34 ಕ್ಷೇತ್ರಗಳಲ್ಲಿ ಹಾಗೂ ಮಹಾ ವಿಕಾಸ ಅಘಾಡಿಗೆ 6 ಕ್ಷೇತ್ರಗಳಲ್ಲಿ ಮುನ್ನಡೆ

08:17, 23 ನವೆಂಬರ್ 2024

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಆರಂಭಿಕ ಮುನ್ನಡೆ ದೊರೆತಿದ್ದು, ಆರು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿಯು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

08:02 23 ನವೆಂಬರ್ 2024

ಮತ ಎಣಿಕೆ ಕೇಂದ್ರದ 2 ಕಿ.ಮೀ. ಸುತ್ತಳತೆಯಲ್ಲಿ ಅಂತರ್ಜಾಲ ಸೇವೆಯನ್ನು ನಿಷೇಧಿಸುವಂತೆ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿಯು ವಿವಿಧ ರಾಜ್ಯಗಳಿಂದ ತಂತ್ರಜ್ಞರನ್ನು ಕರೆಯಿಸಿ ಮತ ಎಣಿಕೆ ಕೇಂದ್ರದ ಬಳಿ ನಿಯೋಜಿಸಿದೆ ಎಂಬ ಸಂಗತಿ ನಂಬಲರ್ಹ ಮೂಲಗಳಿಂದ ಗೊತ್ತಾಗಿದೆ. ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಬೇಕೆಂದರೆ ಮತ ಎಣಿಕೆ ಕೇಂದ್ರದ ಸುತ್ತ ಅಂತರ್ಜಾಲವನ್ನು ನಿಷೇಧಿಸಬೇಕು ಎಂದು ಪಕ್ಷ ಆಗ್ರಹಿಸಿದೆ.


07:56 23 ನವೆಂಬರ್ 2024

ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತ ಎಣಿಕೆ ಆರಂಭಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಹಾಗೂ ಎನ್‌ಸಿಪಿ ನೇತೃತ್ವದ ಮಹಾಯುತಿ ಬಣ ಹಾಗೂ ಕಾಂಗ್ರೆಸ್‌, ಶಿವಸೇನಾ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಮಹಾ ವಿಕಾಸ ಅಘಾಡಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮತ್ತೊಂದೆಡೆ ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ಹಾಗೂ ಜೆಎಂಎಂ ಮೈತ್ರಿ ವಿರುದ್ಧ ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರ ಸ್ಪರ್ಧೆ ನಡೆದಿದೆ. ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಸಿದ್ಧತೆಗಳನ್ನು ಅಧಿಕಾರಿಗಳು ಪೂರೈಸಿದ್ದು, ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭವಾಗಲಿದೆ.

07:37 23 ನವೆಂಬರ್ 2024

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಇತ್ತೀಚೆಗೆ ನಡೆದಿದ್ದು, ಮತ ಎಣಿಕೆಗೆ ಸಿದ್ಧತೆ ಆರಂಭಗೊಂಡಿದೆ. ಗೆಲುವು ಯಾವ ಬಣದ್ದಾಗಲಿದೆ ಹಾಗೂ ಅಧಿಕಾರದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬುದಕ್ಕೆ ಇಂದು ತೆರೆ ಬೀಳಲಿದೆ.


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget