ರಣಥಂಬೋ‌ರ್ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ನಾಪತ್ತೆ


 ಜೈಪುರ: ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಅ ಉದ್ಯಾನದಲ್ಲಿ 25 ಹುಲಿಗಳು ಕಳೆದ ಒಂದು ವರ್ಷದಲ್ಲಿ ನಾಪತ್ತೆಯಾಗಿವೆ.

ಉದ್ಯಾನದಲ್ಲಿನ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿರುವ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ವನ್ಯಜೀವಿ ಅಧಿಕಾರಿ ಪವನ್ ಕುಮಾ‌ರ್ ಉಪಾಧ್ಯಾಯ ತಿಳಿಸಿದ್ದಾರೆ.

ವನ್ಯಜೀವಿ ಇಲಾಖೆ ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ದಾಖಲೆಗಳ ಪರಿಶೀಲನೆ ನಡೆಸಲಿದೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಶಿಫಾರಸು ಮಾಡಲಿದೆ.

ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಹುಲಿಗಳು ನಾಪತ್ತೆಯಾಗಿವೆ ಎನ್ನುವುದು ಗೊತ್ತಾಗಿದೆ. ಇದೇ ಮೊದಲ ಬಾರಿಗೆ ಒಂದು ವರ್ಷದಲ್ಲಿ ಗರಿಷ್ಟ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿವೆ. 2019 ರಿಂದ 22 ರವರೆಗೆ 13 ಹುಲಿಗಳು ರಣಥಂಬೋ‌ರ್ ರಾಷ್ಟ್ರೀಯ ಉದ್ಯಾನದಿಂದ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ.










Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget