ನವದೆಹಲಿ : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಬೆಳ್ಳುಳ್ಳಿ, ಈರುಳ್ಳಿ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ದೇಶದ ಹಲವಡೆ ಸಗಟು ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300 ರೂ.ಗೆ ತಲುಪಿದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂ.ಗೆ ಮಾರಾಟವಾಗುತ್ತಿದೆ.
ಅದೇ ಹೊತ್ತಿಗೆ ಈರುಳ್ಳಿ ಕೂಡ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದೆ.
ಈರುಳ್ಳಿ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತತ್ತರಿಸಿದ್ದು, ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 40-60 ರೂ.ನಿಂದ 70-80 ರೂ.ಗೆ ಏರಿಕೆಯಾಗಿದೆ. ಇದಲ್ಲದೇ ಬೆಳ್ಳುಳ್ಳಿ ಬೆಲೆಯೂ ದುಪ್ಪಟ್ಟಾಗಿದೆ. ಇದರ ನೇರ ಪರಿಣಾಮ ಜನರ ಜೇಬಿನ ಮೇಲೆ ಬೀಳುತ್ತಿದೆ.
ಈರುಳ್ಳಿ ದರ ಕೂಡ ಏರಿಕೆ ಕಂಡಿದ್ದು, ಭಾರಿ ಮಳೆಯಿಂದ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 52 ರೂ. ದಾಟಿದ್ದು, ಸೂಪರ್ ಮಾರ್ಕೆಟ್ ಗಳಲ್ಲಿ 80 ರೂ.ಗೆ ಮಾರಾಟ ಮಾಡಲಾಗುತ್ತಿದೆ.
Post a Comment