ಬೆಂಗಳೂರು: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಣೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ 5 ಸಾವಿರ ರೂ. ಸಹಾಯ ಧನ ಘೋಷಣೆ ಮಾಡಲಾಗಿದೆ.
ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಡೆದ ಸಭೆಯಲ್ಲಿ ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯ ಧನ ನೀಡಲು ತೀರ್ಮಾನಿಸಲಾಗಿದೆ. ಸರಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ ಮುಕ್ಕಾಲು ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು, 120 ವರ್ಷ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಲಾಯಿತು.
ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸಮೀಕ್ಷೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಣೆ ಕುರಿತು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
Post a Comment