ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಂದು 97ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.
ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಇಂದು 97ನೇ ಹುಟ್ಟುಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು, ಅಭಿಮಾನಿಗಳು ಶುಭ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ಎಲ್.ಕೆ.ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶದ ಅತ್ಯಂತ ಮೆಚ್ಚುಗೆ ಪಡೆದ ರಾಜನೀತಿಜ್ಞರಲ್ಲಿ ಅಡ್ವಾಣಿ ಒಬ್ಬರು. ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಿಂದಾಗಿ ಸದಾ ಅವರು ಗೌರವಿಸಲ್ಪಟ್ಟಿದ್ದಾರೆ. ಅವರ ಮಾರ್ಗದರ್ಶನವನ್ನು ಹಲವು ವರ್ಷಗಳಿಂದ ಪಡೆದಿರುವುದು ನನ್ನ ಅದೃಷ್ಟ. ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.
Post a Comment