ನವದಹೆಲಿ : ಇಂದು ದೇಶಾದ್ಯಂತ ಕರ್ನಾಟಕ ರಾಜ್ಯ ಸೇರಿ ಒಟ್ಟು ಹತ್ತು ರಾಜ್ಯಗಳಲ್ಲಿ 31 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಯಲಿದೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ರಾಜಸ್ಥಾನದಲ್ಲಿ 7 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಪಶ್ಚಿಮ ಬಂಗಾಳ-6 ಕ್ಷೇತ್ರ, ಅಸ್ಸಾಂ ನಲ್ಲಿ-5, ಬಿಹಾರದಲ್ಲಿ 4, ಮಧ್ಯಪ್ರದೇಶ-2, ಛತ್ತೀಸ್ಗಢ-1, ಗುಜರಾತ್ , ಕೇರಳ ಮೇಘಾಲಯದಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.
ವಯನಾಡು ಲೋಕಸಭೆಗೂ ಇಂದು ಉಪಚುನಾವಣೆಯ ಮತದಾನ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದಾರೆ.
Post a Comment