ಆಯಂಕರ್ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ 'ಮಹಾಯುತಿ' ಮೈತ್ರಿಕೂಟದ ಐತಿಹಾಸಿಕ ಗೆಲುವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ರವರು ಸಂತಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಮಹಾಯುತಿ ಮೈತ್ರಿಕೂಟದ ಐತಿಹಾಸಿಕ ವಿಜಯಕ್ಕಾಗಿ ಮಹಾರಾಷ್ಟ್ರದ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಬಿಜೆಪಿ-ಮಹಾಯುತಿ ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಮಹಾರಾಷ್ಟ್ರದ ಸಮಗ್ರ ಪ್ರಗತಿ ಮತ್ತು ಜನರ ಆಕಾಂಕ್ಷೆಗಳಿಗೆ ಬದ್ಧವಾಗಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ಪ್ರೇರಿತವಾದ ಡಬಲ್ ಇಂಜಿನ್ ಸರ್ಕಾರವು ರಾಜ್ಯದ ಬೆಳವಣಿಗೆಯನ್ನು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಈ ಮಹೋನ್ನತ ಸಾಧನೆಗಾಗಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜಿ.ಪಿ.ನಡ್ಡಾ, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಮತ್ತು ಬಿಜೆಪಿ ನಾಯಕರು ಹಾಗೂ ಮಹಾಯುತಿ ಕಾರ್ಯಕರ್ತರಿಗೆ ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಸಮಯದಲ್ಲಿ ಅವಿರತವಾಗಿ ಶ್ರಮಿಸಿದ ಸ್ವಯಂಸೇವಾ ಸಂಸ್ಥೆಗಳಿಗೆ ನಾನು ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಗಡ್ಕರಿ ಪೋಸ್ಟ್ ಹಾಕಿದ್ದಾರೆ.
Post a Comment