ಬೆಂಗಳೂರು: ರಾಜ್ಯದ ಎಲ್ಲ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್ ಖಾನ್ ಪಠಾಣ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಎಲ್ಲ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಗೆಲುವು ಬಹುತೇಕ ಖಚಿತಗೊಂಡಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 'ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವುವಾಗಿದೆ' ಎಂದು ಬಣ್ಣಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, 'ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಇದಾಗಿದೆ' ಎಂದು ಹೇಳಿದ್ದಾರೆ.
Post a Comment