ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಅಂತ್ಯ

 ಇಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ



10:05, 20 ನವೆಂಬರ್ 2024

ಮತದಾನ ಆರಂಭ

ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ಬೆಳಿಗ್ಗೆ 7ಕ್ಕೆ ಮತದಾನ ಆರಂಭವಾಗಿದೆ.

ಮಹಾರಾಷ್ಟ್ರ ಎಲ್ಲ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಅಧಿಕಾರದಲ್ಲಿರುವ 'ಮಹಾಯುತಿ' ಹಾಗೂ ವಿರೋಧ ಪಕ್ಷಗಳ 'ಮಹಾ ವಿಕಾಸ ಆಘಾಡಿ' ಮೈತ್ರಿಕೂಟದ ನಡುವೆ ನೇರ ಹಣಾಹಣಿ ಇದೆ.

ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

10:06, 20 ನವೆಂಬರ್ 2024

ಆರಂಭದಲ್ಲೇ ಮತ ಚಲಾಯಿಸಿದ ಚುನಾವಣಾಧಿಕಾರಿ, RBI ಗವರ್ನರ್, ಸಚಿನ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯ ಚುನಾವಣಾಧಿಕಾರಿ ಎಸ್. ಚೊಕ್ಕಲಿಂಗಮ್, ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್, ಬಾಲಿವುಡ್ ನಟ ಅಕ್ಷಯ್ ಕುಮಾ‌ರ್ ಸೇರಿದಂತೆ ಹಲವು ಖ್ಯಾತನಾಮರು ಆರಂಭದಲ್ಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ.

10:10, 20 ನವೆಂಬರ್ 2024

BJP ನಾಯಕ ತಾವ್ ವಿರುದ್ಧ 2 FIR

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಾಲ್ಟರ್‌ನ ಹೋಟೆಲ್‌ನಲ್ಲಿ ಮತದಾರರಿಗೆ ನಗದು ಹಂಚಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಮತ್ತು ಪಕ್ಷದ ಅಭ್ಯರ್ಥಿ ರಾಜನ್ ನಾಯಕ್ ಮತ್ತು ಇತರರ ವಿರುದ್ಧ ಪೊಲೀಸರು ಮಂಗಳವಾರ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

10:15, 20 ನವೆಂಬರ್ 2024

ಉತ್ಸಾಹದಿಂದ ಭಾಗವಹಿಸಿ; ಮೋದಿ ಕರೆ

ರಾಜ್ಯದ ಪ್ರತಿಯೊಬ್ಬ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ಪ್ರಜಾಪ್ರಭುತ್ವದ ಉತ್ಸವಕ್ಕೆ ಸೊಬಗು ನೀಡಿ. ಯುವಕರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ನಾನು ಮನವಿ ಮಾಡುತ್ತೇನೆ.

10:18, 20 ನವೆಂಬರ್ 2024

ಮನೆಯವರ ಆಶೀರ್ವಾದ ಪಡೆದು ಮತ ಹಾಕಲು ಹೊರಟ ಕಾಂಗ್ರೆಸ್ ಅಧ್ಯಕ್ಷ

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನಾನಾ ಪಟೋಲೆ ಅವರು ಮತ ಚಲಾಯಿಸಲು ತೆರಳುವುದಕ್ಕೂ ಮುನ್ನ, ತಮ್ಮ ಕುಟುಂಬದವರ ಆಶೀರ್ವಾದ ಪಡೆದರು. ಈ ಸಂದರ್ಭದ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

10:24, 20 ನವೆಂಬರ್ 2024

ಮಹಾರಾಷ್ಟ್ರದಲ್ಲಿ ಬೆಳಿಗ್ಗೆ 9ರ ಹೊತ್ತಿಗೆ ಶೇ 6.61 ರಷ್ಟು ಮತದಾನವಾಗಿದೆ.

10:25, 20 ನವೆಂಬರ್ 2024

ಜಾರ್ಖಂಡ್‌ನಲ್ಲಿ 2ನೇ ಮತದಾನ ಬಿರುಸುಕೊಂಡಿದೆ. ಬೆಳಿಗ್ಗೆ 9ರ ಹೊತ್ತಿಗೆ ಶೇ 12.71ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

10:32 20 ನವೆಂಬರ್ 2024

ವಿಭಜನೆ ಬಗ್ಗೆಯಷ್ಟೇ ಬಿಜೆಪಿ ಮಾತು: ಕಲ್ಪನಾ ಸೊರೇನ್ ಕಿಡಿ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೇನ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಗಾಂಡೇಯ್ ವಿಧಾನಸಭೆ ಕ್ಷೇತ್ರದಲ್ಲಿ ಜೆಎಂಎಂ ಪಕ್ಷದ ಅಭ್ಯರ್ಥಿಯೂ ಆಗಿರುವ ಅವರು, ಜಾರ್ಖಂಡ್ ರಾಜ್ಯ ರಚನೆಯಾದ ಬಳಿಕ, ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಸೂಕ್ತ ಗೌರವ ಲಭಿಸಿದೆ. ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರು (ಬಿಜೆಪಿಯವರು) ಅಭಿವೃದ್ಧಿಯ ಬಗ್ಗೆ ಚರ್ಚಿಸುವುದಿಲ್ಲ. ಬದಲಾಗಿ, ವಿಭಜನೆಯ ಬಗ್ಗೆಯಷ್ಟೇ ಮಾತನಾಡುತ್ತಾರೆ. ರಾಜ್ಯದಲ್ಲಿ ಖಂಡಿತವಾಗಿಯೂ ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

12:26, 20 ನವೆಂಬರ್ 2024

ಜಾರ್ಖಂಡ್‌ನಲ್ಲಿ ಬೆಳಿಗ್ಗೆ 11ರ ಹೊತ್ತಿಗೆ ಶೇ 31.37ರಷ್ಟು ಮತದಾನವಾಗಿದೆ.

12:27, 20 ನವೆಂಬರ್ 2024

ಮಹಾರಾಷ್ಟ್ರದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಶೇ 18.14ರಷ್ಟು ಮತದಾನವಾಗಿದೆ.

13:03, 20 ನವೆಂಬರ್ 2024

ಉಪ ಚುನಾವಣೆ: ಉತ್ತರ ಪ್ರದೇಶ, ಪಂಜಾಬ್‌ನಲ್ಲಿ ಘರ್ಷಣೆ

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ಕ್ಷೇತ್ರ ಹಾಗೂ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಬೇರೆಬೇರೆ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದೆ. ಪೊಲೀಸರು, ಕೂಡಲೇ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಮತದಾನ ಮುಂದುವರಿದಿದೆ.

13:17, 20 ನವೆಂಬರ್ 2024

ರೇಮಂಡ್ ಗ್ರೂಪ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೌಮ್ ಸಿಂಘಾನಿಯಾ ಅವರು ಮುಂಬೈನಲ್ಲಿ ಮತ ಚಲಾಯಿಸಿದ್ದಾರೆ.

ಎಂವಿಎಗೆ ಮತ ನೀಡಲು ಜನರು ನಿರ್ಧಾರ: ಡಿಕೆಶಿ


ಮಹಾರಾಷ್ಟ್ರದಲ್ಲಿ ಮತದಾನ ನಡೆಯುತ್ತಿದೆ. ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ಸುಳ್ಳು ಭರವಸೆಗಳನ್ನು ನೀಡಿವೆ. ನಾವು ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ. ಮಹಾರಾಷ್ಟ್ರ ಜನರು ಎಂವಿಎಗೆ ಮತ ನೀಡಲು ನಿರ್ಧರಿಸಿದ್ದಾರೆ. ಎಂವಿಎ ಅಧಿಕಾರಕ್ಕೇರಲಿದೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹೇಳಿದ್ದಾರೆ.

14:42 20 ನವೆಂಬರ್ 2024

ಮಹಾರಾಷ್ಟ್ರದಲ್ಲಿ ಆಘಾತಕಾರಿ ಎನ್ನವಂತೆ ಮತದಾನದ ಪ್ರಮಾಣ ಭಾರಿ ಇಳಿಕೆ ಕಂಡು ಬಂದಿದ್ದು ಮಧ್ಯಾಹ್ನ 1 ಗಂಟೆವರೆಗೂ ಶೇ 32.18 ರಷ್ಟು ಮಾತ್ರ ಆಗಿದೆ. ಮುಂಬೈನಲ್ಲಂತೂ ಕೇವಲ ಶೇ 27.73 ರಷ್ಟು ಆಗಿದೆ.

15:21 20 ನವೆಂಬರ್ 2024

ಜಾರ್ಖಂಡ್‌ನಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 47.92 ರಷ್ಟು ಮತದಾನವಾಗಿದೆ. 38 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ.


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget