ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ



ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಿನುತಾ ಪಾತಿಕಲ್ಲು ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಘಟಕದ ಪದಾಧಿಕಾರಿಗಳಾದ ರೇಣುಕಾ ಸದಾನಂದ ಜಾಕೆ, ಪುಷ್ಪಾವತಿ ಮಾಣಿಬೆಟ್ಟು , ಜಯಶ್ರೀ ರಾಮಚಂದ್ರ ಪಲ್ಲತ್ತಡ್ಕ, ಸವಿತಾ ಸಂದೇಶ್, ತಾಲೂಕು ಗೌಡ ಯುವ ಸೇವಾ ಸಂಘದ ಪಿ ಎಸ್ ಗಂಗಾಧರ, ನಿತ್ಯಾನಂದ ಮುಂಡೋಡಿ, ಪಿ ಸಿ ಜಯರಾಮ, ಚಂದ್ರಕೋಲ್ಚಾರ್, ಸುರೇಶ್ ಎಂ ಹೆಚ್, ತೀರ್ಥರಾಮ ಅಡ್ಕಬಳೆ ಮೊದಲಾದವರು ಉಪಸ್ಥಿತರಿದ್ದರು. ವಿನುತಾ ಪಾತಿಕಲ್ಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಲಕ್ಷ್ಮಿ ನಾರ್ಕೋಡು ವಂದಿಸಿದರು. ಸವಿತ ಸಂದೇಶ ಕಾರ್ಯಕ್ರಮ ನಿರೂಪಿಸಿದರು.














Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget