ಲಖನೌ(ಉತ್ತರ ಪ್ರದೇಶ): ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟಗಾರರ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಸರ್ಕಾರ ಮುಂದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಸಂಭಲ್‌ನ ಕೋಟ್ ಗರ್ವಿ ಪ್ರದೇಶದಲ್ಲಿರುವ ಜಾಮಾ ಮಸೀದಿ ಸಮೀಕ್ಷೆ ಕಾರ್ಯಾಚರಣೆ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಪೊಲೀಸ್ ಸಿಬ್ಬಂದಿ ಸೇರಿ ಹಲವು ಜನರು ಗಾಯಗೊಂಡಿದ್ದರು.
'ಹಿಂಸಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಕಲ್ಲು ತೂರಾಟಗಾರರ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳದಲ್ಲಿ ಪ್ರದರ್ಶಿಸುವುದು, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ಹಣ ಪಾವತಿಸುವಂತೆ ಮಾಡುವುದು ಹಾಗೂ ಕಿಡಿಗೇಡಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಲಾಗುತ್ತದೆ' ಎಂದು ಅವರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಇಲ್ಲಿಯವರೆಗೆ 25 ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Post a Comment