ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ ನಡೆದುಕೊಂಡು ಬಂದಿದ್ದೇನೆ ಎಂದರು.
ಮುಡಾ ಹಗರಣದಲ್ಲೂ ನಾನು ಕಾನೂನು ಪ್ರಕಾರವೇ ನಡೆದುಕೊಳ್ಳುತ್ತೇನೆ. ಮುಡಾ ಹಗರಣದಲ್ಲಿ ನಾನು ಕಾನೂನು ಉಲ್ಲಂಘನೆ ಮಾಡಿಲ್ಲ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ನನಗೂ ಕಾನೂನಿನ ತಿಳುವಳಿಕೆ ಇದೆ ಎಂದು ಹೇಳಿದರು.
Post a Comment