ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇದೀಗ ಕೆಲವೆ ರಾಜ್ಯಗಳಲ್ಲಿ ಮಾತ್ರ ಆರ್ಭಟ ಮುಂದುವರೆಸಿದ್ದಾನೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ನವೆಂಬರ್ 7) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಚದುರಿದಂತೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಲಡಾಖ್‌ನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಹಿಮದ ವಾತಾವರಣ ನಿರ್ಮಾಣವಾಗಲಿದೆ. ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉತ್ತರ, ಮಧ್ಯ, ಪಶ್ಚಿಮ ಮತ್ತು ಪೂರ್ವ, ದಕ್ಷಿಣ ಭಾರತದ ಕಲವೆಡೆ ಗಾಳಿಯ ಗುಣಮಟ್ಟ ತುಂಬಾ ಕಳಪೆಯಾಗುವ ಸಾಧ್ಯತೆಯಿದೆ ಎಮದು ತಿಳಿಸಿದೆ.
ಶುಕ್ರವಾರ (ನವೆಂಬರ್ 8) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ ಕೆಲವು ದಿನಗಳ ಕಾಲ ಬಂಗಾಳ ಕೊಲ್ಲಿಯಲ್ಲಿ ಇದೀಗ ಚಂಡಮಾರುತದ ಪರಿಚಲನೆ ಇರಲಿದ್ದು, ಪರಿಣಾಮ ಪೂರ್ವ ತುದಿಯಲ್ಲಿರುವ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಇಂದು (ನವೆಂಬರ್ 07) ಇಲ್ಲಿನ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ಒಂದು ವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ಪಶ್ಚಿಮ ಲಡಾಖ್‌ನಲ್ಲಿ ಸೋಮವಾರದವರೆಗೆ ಹಿಮಪಾತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Post a Comment