ನವದೆಹಲಿ: ನೂತನ ಮಹಾ ಲೆಕ್ಕ ಪರಿಶೋಧಕ ಮತ್ತು ಮಹಾಲೇಖಪಾಲರಾಗಿ (ಸಿಎಜಿ) ಕೆ. ಸಂಜಯ್ ಮೂರ್ತಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ತಿಳಿಸಿದೆ.
1989ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅವರು, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಸಿಎಜಿ ಗಿರೀಶ್ ಚಂದ್ರ ಮುರ್ಮು ಅವರ ಅಧಿಕಾರಾವಧಿ ಬುಧವಾರ ಮುಕ್ತಾಯಗೊಂಡಿದೆ. ಹಾಗಾಗಿ, ಕೇಂದ್ರ ಸರ್ಕಾರವು ನೂತನ ಸಿಎಜಿ ಆಗಿ ಸಂಜಯ್ ಅವರ ಹೆಸರನ್ನು ಸೂಚಿಸಿತ್ತು.
Post a Comment