ನವದೆಹಲಿ: 'ಉತ್ತರ ಪ್ರದೇಶದ ಮದರಸಾ ಕಾಯ್ದೆ-2004ರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಎತ್ತಿ ಹಿಡಿದಿದೆ. ಇದರೊಂದಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ತಳ್ಳಿಹಾಕಿದೆ.
'ಮದರಸಾಗಳಲ್ಲಿ ಸೂಚಿಸಲಾದ ಶಿಕ್ಷಣದ ಮಟ್ಟವನ್ನು ಪ್ರಮಾಣೀಕರಿಸುವುದು ಕಾಯ್ದೆಯ ಉದ್ದೇಶವಾಗಿದೆಯೇ ಹೊರತು ಮದರಸಾಗಳ ದೈನಂದಿನ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ' ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.
'ಈ ಕಾಯ್ದೆಯು ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವುದು ಮತ್ತು ಸಕಾರಾತ್ಮಕ ಬಾಧ್ಯತೆಗೆ ಅನುಗುಣವಾಗಿರುತ್ತದೆ. ಜತೆಗೆ, ವಿದ್ಯಾರ್ಥಿಗಳು ಉತ್ತೀರ್ಣರಾಗಲು ಮತ್ತು ಯೋಗ್ಯವಾದ ಜೀವನವನ್ನು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ' ಎಂದು ಹೇಳಿದ್ದಾರೆ.
'ನಾವು ಉತ್ತರ ಪ್ರದೇಶದ ಮದರಸಾ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿದಿದ್ದೇವೆ. ಕಾಯ್ದೆಯಲ್ಲಿ ಭಾಗ 3ರ ಮೂಲಭೂತ ನಿಯಮಗಳನ್ನು ಉಲ್ಲಂಘನೆಯಾದರೆ ಮಾತ್ರ ಕಾಯ್ದೆಯನ್ನು ರದ್ದುಪಡಿಸಬಹುದು' ಎಂದು ತಿಳಿಸಿದ್ದಾರೆ.
Post a Comment