ಬೆಂಗಳೂರು: ರೈತರಿಗೆ ಬಿಗ್ ರಿಲೀಫ್ ಎನ್ನುವಂತೆ ರಾಜ್ಯ ಸರ್ಕಾರ ವಕ್ಫ್ ಮ್ಯೂಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಿದೆ. ಅಲ್ಲದೇ, ರೈತರಿಗೆ ನೀಡಿದ ಎಲ್ಲಾ ನೋಟಿಸ್ ಹಿಂಪಡೆಯಲು ಅಧಿಕೃತವಾಗಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಈ ಕುರಿತು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿ ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ಅದರಲ್ಲಿ, ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿ ಈ ಕಳಕಂಡಂತೆ ಸೂಚನೆಯನ್ನು ನೀಡಿರುತ್ತಾರೆ ಎಂದಿದ್ದಾರೆ.
1. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮ್ಯುಟೇಷನ್ ಮಾಡಲು ಯಾವುದೇ ಕಛೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯುವುದು ಹಾಗೂ ಮುಟೇಷನ್ ಪುಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವುದು.
2. ಈ ಕುರಿತು ನೀಡಲಾದ ಎಲ್ಲಾ ನೋಟೀಸುಗಳನ್ನು ಹಿಂಪಡೆಯುವುದು.
3. ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರುಗಳ ವಿರುದ್ಧ ಯಾವುದೇ ಕ್ರಮವನ್ನು ಜರುಗಿಸತಕ್ಕದಲ್ಲ.
ಮುಖ್ಯಮಂತ್ರಿಗಳ ಸೂಚನೆಯನ್ವಯ ಸರ್ಕಾರದ ಪತ್ರ ಸಂಖ್ಯೆ:ಕಂಇ 99 ಟಿಆರ್ ಎಂ 2024, ದಿನಾಂಕ:15.04.2024, 23.04.2024 ಹಾಗೂ ದಿನಾಂಕ:07.11,2024ರ ನನಪೋಲೆ-2 ಇವುಗಳನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿಗಳ ಆದೇಶವಿದ್ಯಾಗ್ಯೂ, ಮೇಲಾಧಿಕಾರಿಗಳ ಅನುಮತಿ / ಅನುಮೋದನೆ ಇಲ್ಲದೇ ದಿನಾಂಕ:07.11.2024ರ ನೆನಪೋಲೆ-2ನ್ನು ಹೊರಡಿಸಿದ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು. ಮುಖ್ಯಮಂತ್ರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಹೇಳಿದ್ದಾರೆ.
Post a Comment