ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ - ಪ್ರಮೀಳಾ ಟಿ
ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯ ಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ ಎಂ, ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ಡಾ. ಮಮತಾ ಕೆ ಯುವ ರೆಡ್ ಕ್ರಾಸ್ ಘಟಕದ ನಾಯಕರಾದ ಷಣ್ಮುಖ ಹಾಗೂ ದೀಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ 45 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದ್ವಿತೀಯ ಬಿ ಎಸ್ಸಿಯ ಅಕ್ಷತಾ ಸಿ - ಪ್ರಥಮ, ವಿಜಯಲಕ್ಷ್ಮಿ ಎ- ದ್ವಿತೀಯ ಹಾಗೂ ಪ್ರಥಮ ಬಿ ಸಿ ಎ ಯ ಪ್ರಜ್ಞಾ ಎನ್ -ತೃತೀಯ ಸ್ಥಾನವನ್ನು ಪಡೆದುಕೊಂಡರು.
Post a Comment