ಹೈದರಾಬಾದ್: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು,
ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ವಿಆರ್‌ಎಸ್ (ಸ್ವಯಂ ನಿವೃತ್ತಿ ಯೋಜನೆ) ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.
ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು.
ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ.
ನಾವು ಅದನ್ನು ಪರಿಶೀಲಿಸಬೇಕಾಗಿದೆ” ಎಂದು ಅವರು ಹೇಳಿದರು. ವೆಂಕಟೇಶ್ವರ ದೇವರ ಕಟ್ಟಾ ಭಕ್ತರಾದ ನಾಯ್ಡು ಅವರು ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಒಂದು ವಿಶೇಷತೆ ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ.
ಮಂಡಳಿಯ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಎನ್‌ಡಿಎ ಸರ್ಕಾರದ ಇತರ ನಾಯಕರಿಗೆ ಅವರು ಧನ್ಯವಾದ ಅರ್ಪಿಸಿದರು.
Post a Comment