ಕಂಪ್ಯೂಟರ್ ವಿಭಾಗ ಮತ್ತು ಧ್ವನಿವರ್ಧಕ ಲೋಕಾರ್ಪಣೆ,ಗಣ್ಯರ ಭಾಗಿ
ರಾಜ್ಯೋತ್ಥಾನ ಶಿಶುಮಂದಿರ ಟ್ರಸ್ಟ್ (ರಿ.) ಇದರ ಆಶ್ರಯದಲ್ಲಿ
ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಜಾಲ್ಸೂರು ವತಿಯಿಂದ ವಾರ್ಷಿಕ ಹಬ್ಬ ಮತ್ತು ಕಂಪ್ಯೂಟರ್ ವಿಭಾಗ ಹಾಗೂ ಧ್ವನಿವರ್ಧಕ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 16 ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದರಾದ ಬ್ರಿಜೇಶ್ ಚೌಟ,ಶಾಸಕಿ ಭಾಗೀರಥಿ ಮುರುಳ್ಯ,ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಸಹಾಯಕ ಆಯುಕ್ತರಾದ ಶ್ರೀ ಜುಬಿನ್ ಮೊಹಪಾತ್ರ,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸ್ಥಳೀಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮ ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದಾಗಿ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
Post a Comment