ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ.
ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.
ಬೆಳಗ್ಗೆ 11.29ಕ್ಕೆ ಹೊಸಹಳ್ಳಿಗೆ ಆಗಮಿಸಲಿರುವ ಅವರು ಸಂಜೆಯವರೆಗೆ ನಿಖಿಲ್ ಪರ ಮತಯಾಚಿಸಿ ಪ್ರಚಾರ ನಡೆಸಲಿದ್ದಾರೆ.
ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇಂದು ಚನ್ನಪಟ್ಟಣ ಕ್ಷೇತ್ರದ ವಿವಿಧೆಡೆ ಯದುವೀರ್ ಪ್ರಚಾರ ನಡೆಸಲಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಹೊಂಗನೂರಿನಲ್ಲಿ ಡಿ.ಕೆ. ಶಿವಕುಮಾರ್ ಮತಯಾಚಿಸಲಿದ್ದಾರೆ. ಅವರು ಇಂದು ಒಟ್ಟು ಎಂಟು ಕಡೆಗಳಲ್ಲಿ ಮತಯಾಚನೆ ನಡೆಸಲಿದ್ದಾರೆ.
Post a Comment