ಪುತ್ತೂರಿನಲ್ಲಿ ಸಾರ್ವಜನಿಕರನ್ನು ಭೇಟಿಯಾದ ಸಂಸದ ಕ್ಯಾ. ಚೌಟ: ಅಹವಾಲು ಸ್ವೀಕಾರ


ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಅವರು ಸ್ಥಳೀಯ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ್ದಾರೆ.


ಸಂಸದ ಕ್ಯಾ. ಚೌಟ ಅವರು ಶುಕ್ರವಾರ ಬೆಳಗ್ಗೆ ಪುತ್ತೂರಿನ ಐಬಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಈ ಭಾಗದ ನಾಗರಿಕರು ರಸ್ತೆ, ವಿವಿಧ ಅಭಿವೃದ್ಧಿ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸ್ಪಂದಿಸುವಂತೆ ಮನವಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸಿದ ಸಂಸದರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.



ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ರೈತರಿಗಾಗಿ ಕಿಸಾನ್‌ ಸಮ್ಮಾನ್‌, ಸ್ವಾವಲಂಬಿ ವಿದ್ಯುತ್‌ ಬಳಕೆಗೆ ಪಿಎಂ ಸೂರ್ಯ ಘರ್‌ ಯೋಜನೆ, ಆರೋಗ್ಯ ಸಂರಕ್ಷಣೆಗೆ ಪಿಎಂ ಆಯುಷ್ಮಾನ್‌ ಹೀಗೆ ಹಲವು ಜನಪ್ರಿಯ ಯೋಜನೆಗಳನ್ನು ಪ್ರಾರಂಭಿಸಿದೆ. ಈ ಎಲ್ಲ ಕೇಂದ್ರ ಸರ್ಕಾರದ ಯೋಜನೆಗಳು ಫಲಾನುಭವಿಗಳನ್ನು ಪರಿಣಾಮಕಾರಿಯಾಗಿ ತಲುಪುತ್ತಿರುವ ವಿಚಾರಗಳ ಬಗ್ಗೆಯೂ ಸಂಸದರು ಇದೇ ಸಂದರ್ಭದಲ್ಲಿ ನಾಗರಿಕರಿಂದ ಮಾಹಿತಿ ಪಡೆದುಕೊಂಡರು.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget