ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬೂಮಿ ಸಂಘಟನೆ ಎಚ್ಚರಿಕೆ

 


ಮಡಿಕೇರಿ ನ.23  : ಭಾರತ ದೇಶದ ಆಸ್ತಿಯಾಗಿರುವ ಭಾರತೀಯ ಸೇನೆಯ ಪಿತಾಮಹ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಗಳ ಜನರಲ್ ಖ್ಯಾತಿಯ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ ಕಿಡಿಗೇಡಿಯನ್ನು ತಕ್ಷಣ ಗಡಿಪಾರು ಮಾಡಬೇಕು. ತಪ್ಪಿದಲ್ಲಿ ಕೊಡಗು ಬಂದ್ ಗೆ ಕರೆ ನೀಡುವುದಾಗಿ ಜಟ್ಟೂಮಿ ಸಂಘಟನೆಯ ಅಧ್ಯಕ್ಷ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀವತ್ಸ ಭಟ್ ಎಂಬ ಖಾತೆಯ ಮೂಲಕ ವೀರ ಸೇನಾನಿಗಳನ್ನು ಅವಮಾನಿಸಿದ ಆರೋಪಿಯನ್ನು ಬಂಧಿಸಿರುವ ಕುರಿತು ಈಗಾಗಲೇ ಮಾಹಿತಿ ಲಭ್ಯವಾಗಿದೆ. ಆದರೆ ಈತನನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರು ಜಾತಿ, ಮತ ಬೇಧ, ಧರ್ಮಗಳನ್ನು ಮೀರಿದ ಅಪ್ರತಿಮ ವ್ಯಕ್ತಿತ್ವದ ವೀರ ಸೇನಾಧಿಕಾರಿಗಳಾಗಿದ್ದಾರೆ. ಭಾರತೀಯ ಸೇನೆಗೆ ಮತ್ತು ಭಾರತದ ರಕ್ಷಣೆಗೆ ಇವರಿಬ್ಬರು ನೀಡಿದ ಕೊಡುಗೆ ಅಪಾರವಾಗಿದೆ. ಇವರನ್ನು ಅವಹೇಳನ ಮಾಡಿರುವುದು ದೇಶದ್ರೋಹದ ಕೃತ್ಯವಾಗಿದೆ. ಇಡೀ ದೇಶದ ಜನರೇ ಬೇಸರ ಪಡುವಂತಹ ಪ್ರಕರಣ ಇದಾಗಿದೆ.

ಆದ್ದರಿಂದ ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಆರೋಪಿಯನ್ನು ತಕ್ಷಣ ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು.


ಪೊಲೀಸ್ ಇಲಾಖೆ ಈ ಪ್ರಕರಣದ ಕುರಿತು ನಿರ್ಲಕ್ಷ್ಯ ವಹಿಸಿದರೆ ಎಲ್ಲಾ ಜಾತಿ, ಜನಾಂಗಗಳ, ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಜಬೂಮಿ ಸಂಘಟನೆ ಕೊಡಗು ಬಂದ್ ಹೋರಾಟಕ್ಕೆ ಮುಂದಾಗಲಿದೆ ಎಂದು ರಾಜೀವ್‌ ಬೋಪಯ್ಯ ತಿಳಿಸಿದ್ದಾರೆ.

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget