ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.
ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ. ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿಯವರೆಗೂ ಕಮಲಾ ಹ್ಯಾರಿಸ್ 214 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ ಅವರು ಅವರಿಗಿಂತ 251 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.
Post a Comment