ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಗೆಲುವಿನತ್ತ ಸಾಗಿದೆ.
ಬೆಳಿಗ್ಗೆಯಿಂದ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಸೋಲಿನ ಮುನ್ಸೂಚನೆ ದೊರೆಯುತ್ತಿದ್ದಂತೆ ಮತ ಎಣಿಕೆ ಕೇಂದ್ರದಿಂದ ಹೊರಬಂದು ವಾಹನ ಏರಿ ಹೊರಟರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಕಾಂಗ್ರೆಸ್ ಸರ್ಕಾರ ಹಣದ ಹೊಳೆ ಹರಿಸಿದೆ' ಎಂದರು.
'ಶಿಗ್ಗಾವಿ ಜನತೆಗೆ ಕೃತಜ್ಞತೆ ಅರ್ಪಿಸುವೆ. ಸೋಲಿಗೆ ಕಾರಣವೇನು? ಎಂಬ ಬಗ್ಗೆ ಬೂತ್ ಮಟ್ಟದಲ್ಲಿ ಚರ್ಚಿಸಲಾಗುವುದು' ಎಂದರು.
Post a Comment